ಪುತ್ತೂರು: ತಿಂಗಳ ಮೂರನೇ ಶನಿವಾರವಾದ ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರ ಎಂಬಲ್ಲಿರುವ ಗೌಡ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಉದ್ದೇಶಿಸಿರುತ್ತಾರೆ, ಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.