ಉಪ್ಪಿನಂಗಡಿ: ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಮತ್ತು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಏ.5 ರಂದು ನಡೆದಿದೆ.
ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ (56) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಟಾಟಾಏಸ್ ನಲ್ಲಿದ್ದ ರಫೀಕ್ ಮತ್ತು ಕರೀಮ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.