ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅ.2 ರಂದು ಗಾಂಧಿ ಜಯಂತಿ ಮತ್ತು ಶಾರದಾ ದೇವಿಯ ಪೂಜೆಯನ್ನು ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ್ ರೈ ರವರು ದೀಪ ಬೆಳಗಿಸಿ, 153 ನೇ ಗಾಂಧಿ ಜಯಂತಿಯ ಪ್ರಾಮುಖ್ಯತೆಯ ಬಗ್ಗೆ ತಿಳಿಸುತ್ತಾ ಲಾಲ್ ಬಹುದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿದರು ಹಾಗೂ ನವರಾತ್ರಿ ಪ್ರಯುಕ್ತ ವಿದ್ಯಾ ದೇವತೆಯಾದ ಶಾರದಾ ದೇವಿಯನ್ನು ಭಜನೆ ಮೂಲಕ ಸ್ತುತಿಸುವುದರೊಂದಿಗೆ ದೇವಿಯ ಕೃಪಾಕಟಾಕ್ಷವು ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಉತ್ತಮ ಅಂಕವನ್ನು ಪಡೆಯಲು ಸಹಕರಿಸಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆಯಾದ ಜ್ಯೋತಿ ಶೆಣೈ, ಶಿಕ್ಷಕ ವೃಂದ, ಶಿಕ್ಷಕರೇತರ ವೃಂದ ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ಪೂಜೆ ಹಾಗೂ ಭಜನೆಯಲ್ಲಿ ಪಾಲ್ಗೊಂಡಿದ್ದರು.






























