ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ರವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದರು.

ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲಿಯೇ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.




























