ಮಂಗಳೂರು: ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳಿಗೆ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಲಾಗಿರುತ್ತದೆ.

ಯಾರೋ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಅನುಮಾನಗೊಳಿಸುವ ಉದ್ದೇಶದಿಂದ ಕೃತ್ಯವನ್ನು ಎಸಗಿರುವವರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
























