ಸುಳ್ಯ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಕೇರಳ ವಯನಾಡು, ಕಲ್ಲವಲ್ಲಿಪಾಲ್ ನಿವಾಸಿ ಎಂ. ಸಿದ್ಧಿಕ್ (43) ಬಂಧಿತ ಆರೋಪಿ.

ಸಿದ್ಧಿಕ್ ವಿರುದ್ಧ ಸುಳ್ಯ ಠಾಣೆಯಲ್ಲಿ ಸಿಸಿ 1338/2003 ಸೆಕ್ಷನ್ 457, 380 ರಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ್ದಂತೆ 19 ವರುಷಗಳಿಂದ ಈತ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.
ಅ.11 ರಂದು ಸುಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ..
























