ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ರವರಿಗೆ ರಾಜ್ಯ ಸರ್ಕಾರ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿದ್ದು, ಇಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು.
ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಅದರಂತೆ ಕೆಲ ದಿನಗಳ ಹಿಂದೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ನೀಡಿತ್ತು.


























