ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರನ್ನು ದುಷ್ಕರ್ಮಿಗಳ ಪಡೀಲ್ ನಿಂದ ಫರಂಗಿಪೇಟೆ ಯವರೆಗೆ ಬೆನ್ನಟ್ಟಿದ್ದಾರೆ.
ಫರಂಗಿಪೇಟೆ ಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವಾಚ್ಯ ಶಬ್ದದಿಂದ ಬೈದು ತಲವಾರು ಝಳಪಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಇದೀಗ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.


























