ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಈ ಘಟನೆಯನ್ನು ಹಿಂದೂ ಜಾಗರಣಾ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯು ತೀವ್ರವಾಗಿ ಖಂಡಿಸಿದೆ.
ಶಾಸಕರೋರ್ವರ ವಾಹನವನ್ನೇ ಅಡ್ಡಗಟ್ಟಿ ಈ ರೀತಿಯ ದುಷ್ಕೃತ್ಯವನ್ನು ಎಸಗಿರುವುದು ಅಪರಾಧವಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ತಿಳಿಸಿದೆ.
ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























