ವಿಟ್ಲ: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ಮತ್ತು ಸಾಲೆತ್ತೂರು ಮತ್ತು ಧರ್ಮಸ್ಥಳ ಜನಜಾಗೃತಿ ವೇದಿಕೆ ಸಾಲೆತ್ತೂರು ವಲಯ ಇದರ ಪ್ರಾಯೋಜಕತ್ವದಲ್ಲಿ ಎ ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಎ ಜೆ ದಂತ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ತಪಾಸಣಾ ಕಾರ್ಯಕ್ರಮವು ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಲಯನ್ಸ್ ಸ್ಥಾಪಕ ಸದಸ್ಯ ಸಿ ವಿ ಗೋಪಾಲಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೇಶ್ ಭಂಢಾರಿ, ಲಯನ್ಸ್ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ವೈದ್ಯರು, ಆಶಾ ಕಾರ್ಯಕರ್ತೆಯರು, ಮುಖ್ಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ , ಸದಸ್ಯರು, ಪೋಷಕರು ಉಪಸ್ಥಿತರಿದ್ದರು.


























