ವಿಟ್ಲ: ವ್ಯಕ್ತಿಯೋರ್ವರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.16 ರಂದು ವಿಟ್ಲದ ಕುದ್ದುಪದವು ಎಂಬಲ್ಲಿ ನಡೆದಿದೆ.

ಮೃತರನ್ನು ಮೂಲತಃ ಕಡಬ ತಾಲೂಕು ಪೆರಾಬೆ ಗ್ರಾಮ ಸುರುಳಿಮನೆ ನಿವಾಸಿ ಕೇಶವ ಆಚಾರ್ಯ (48) ಎಂದು ಗುರುತಿಸಲಾಗಿದೆ.
ಕೇಶವ ರವರು ವಿಟ್ಲದ ಕುದ್ದುಪದವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ..


























