ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರ ಅ.15 ರಂದು ನಡೆಯಿತು.

ಕಾರ್ಯಾಗಾರದ ಬೆಳಗಿನ ಅವಧಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ವಿದ್ಯಾಲಯದ ನಿವೃತ ಪ್ರಾಂಶುಪಾಲರಾದ ಮಾಧವ್ ಭಟ್ ಆಗಮಿಸಿ ಚಟುವಟಿಕೆಗಳ ಮೂಲಕ ಶಿಕ್ಷಕರಲ್ಲಿ ನವ ಚೈತನ್ಯವನ್ನು ತುಂಬಿದರು.

ಮಧ್ಯಾಹ್ನದ ಅವಧಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ತುಳು ಅಕಾಡೆಮಿಯ ಕೋಶಾಧಿಕಾರಿ ಚಂದ್ರಹಾಸ ರೈ ರವರು ಆಗಮಿಸಿ ಶೈಕ್ಷಣಿಕವಾಗಿ ಕೆಲವೊಂದು ಸಲಹೆಗಳನ್ನು ನೀಡಿದರು.

ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್, ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಕೆದಿಲಾಯ, ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್ ರವರು ಉಪಸ್ಥಿತರಿದ್ದರು.

ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾರಾದ ಜಯಮಾಲಾ ವಿ ಎನ್ ಧನ್ಯವಾದಗೈದರು.


























