ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸೋಮವಾರ ಪರ್ಲಿಯಾ ಎಂಬಲ್ಲಿ ನಡೆದಿದೆ.
ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್, ಹಾಗೂ ಅಹಮ್ಮದ್ ಸೈಫ್ ಬಂಧಿತ ಆರೋಪಿಗಳು.

ಆರೋಪಿಗಳಿಬ್ಬರು ಪರ್ಲಿಯಾ ಮದ್ದ ಎಂಬಲ್ಲಿ ರಸ್ತೆ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಗಾಂಜಾ ಸೇವನೆ ಮಾಡುವುದು ಅಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿ ಅಶಾಂತಿ ಹಬ್ಬಿದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಬ್ಬರನ್ನು ಸ್ಥಳದಲ್ಲಿ ಬಂಧಿಸಿ ವಿಚಾರಣೆ ನಡೆಸಿದಾಗ ಗಾಂಜಾ ಸೇವೆನೆ ಮಾಡಿದ ಬಗ್ಗೆ ತಪ್ಪು ಒಪ್ಪಿಕೊಂಡಿದ್ದಾರೆ. ಅ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಇವರು ಗಾಂಜಾ ಸೇವಿಸಿದ್ದು ಖಾತರಿಯಾಗಿ ಅವರ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
























