ಮಂಗಳೂರು: ಜಾನುವಾರುಗಳ ಚರ್ಮಗಂಟು ರೋಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.
ಬೆಂಗಳೂರಿನಿಂದ ಸೋಮವಾರ ಸರಬರಾಜು ನಡೆದಿದ್ದು, ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿತರಣೆ ನಡೆಯಲಿದೆ.
ಮೊದಲ ಶಂಕಿತ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ. ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ..


























