ಪುತ್ತೂರು: ವ್ಯಕ್ತಿಯೋರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅ.19ರ ಮಧ್ಯರಾತ್ರಿ ದರ್ಬೆಯ ಲಾಡ್ಜ್ ವೊಂದರಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದವರೆಂದು ಶಂಕಿಸಲಾಗಿದೆ.
ಮೃತ ವ್ಯಕ್ತಿಯು ಎರಡು ದಿನಗಳ ಹಿಂದೆ ದರ್ಬೆಯ ಲಾಡ್ಜ್ ವೊಂದರಲ್ಲಿ ರೂಮ್ ಮಾಡಿದ್ದು, ಇಂದು ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ..

























