ಕಾರ್ಕಳ: ಕರಾವಳಿಯ ಹಿಂದೂಗಳ ಮನೆ ಮನೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆರಾಧಿಸುವ ಮತ್ತು ನಡೆಸುವ ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಅಲ್ಲದೆ, ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡ ಚಲನಚಿತ್ರ ನಟ ಚೇತನ ಕುಮಾರ್ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ಕಾರ್ಕಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

























