ಕಡಬ: ಕಾರಿನಲ್ಲಿ ಬಂದ ಅಪರಿಚಿತರು ಮಹಿಳೆಯೊಬ್ಬರ ಸರ ಕದ್ದು ಪರಾರಿಯಾಗುತ್ತಿರುವ ಸಂದರ್ಭದಲ್ಲಿ ಕಾರು ಅಪಘಾತಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾಣಿಯೂರಿನಲ್ಲಿ ನಡೆದಿದೆ.
ಮಹಿಳೆಯೋರ್ವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ತಕ್ಷಣ ಮಹಿಳೆ ಕಿರುಚಿಕೊಂಡಾಗ ಸ್ಥಳದಲ್ಲಿದ್ದ ಜನರು ಕಳ್ಳರನ್ನು
ಬೆನ್ನಟ್ಟಿದ್ದು, ಅತೀ ವೇಗದಲ್ಲಿ ಕಾರು ಚಲಾಯಿಸಿದ್ದರಿಂದ ಇಬ್ಬರು ಅಪಘಾತಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

























