ಬಂಟ್ವಾಳ: ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಮೂರ್ಜೆ (ಮೂರ್ಕಜೆ) ನಂದರ ವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ವತಿಯಿಂದ ‘ಗುರುವಂದನಾ – ಕುಟುಂಬ ಸಮ್ಮಿಲನ’ ಕಾರ್ಯಕ್ರಮವು ವಿಟ್ಲದ ಅಕ್ಷಯ ಸಭಾಭವನದಲ್ಲಿ ಅ.22 ರಂದು ನಡೆಯಲಿದೆ.
ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹವನ, ಸತ್ಯನಾರಾಯಣ ಪೂಜೆ ಜರುಗಲಿದ್ದು, 10.30 ರಿಂದ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ಗುರುವಂದನಾ ಕಾರ್ಯಕ್ರಮ, ಸ್ವಾಮೀಜಿಗಳಿಂದ ಆಶೀರ್ವಚನ ಹಾಗೂ ಅತಿಥಿಗಳಿಂದ ಸಂದೇಶ ಜರುಗಲಿದೆ.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ಅಧ್ಯಕ್ಷ ಕೆ.ಎಸ್. ಗೋಪಾಲಕೃಷ್ಣ ಗೌಡ ಮೂರ್ಜೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಪುತ್ತೂರು ಶಾಸಕ ಸಂಜೀವ ಮಠಂದೂರು, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ಕೆ.ವಿ. ರೇಣುಕಾಪ್ರಸಾದ್, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಬಿ. ಜಯಪ್ರಕಾಶ್ ಗೌಡ, ದೈವಜ್ಞ ಶಶಿಧರನ್ ಮಾಂಗಾಡು ಉಪಸ್ಥಿತರಿರಲಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕೆ.ಎಫ್.ಡಿ.ಸಿ. ಅಧ್ಯಕ್ಷ ಎ.ವಿ. ತೀರ್ಥರಾಮ ಅಂಬೆಕಲ್ಲು, ಬಂಟ್ವಾಳ ಒಕ್ಕಲಿಗರ ಯಾನೆ ಗೌಡರ ಸೇವಾಸಂಘದ ಅಧ್ಯಕ್ಷ ಮೋಹನ ಗೌಡ ಕಾಯರ್ ಮಾರ್, ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























