ಪುತ್ತೂರು: ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಶ್ರೀಕೃಷ್ಣ ಉಪಾಧ್ಯಾಯರ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ನಿಯೋಗವು ದೂರು ನೀಡಿದ್ದು, ಶ್ರೀಕೃಷ್ಣ ಉಪಾಧ್ಯಾಯರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ನಿಯೋಗವು, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ರವರ ನೇತೃತ್ವದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಶ್ರೀಕೃಷ್ಣ ಉಪಾಧ್ಯಾಯರು ನಿರಂತರವಾಗಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದು, ಅ.20 ರಂದು ಕೂಡ ನಡೆದ ಸಭೆಯೊಂದರಲ್ಲಿ,ಇದರ ಬಗ್ಗೆ ಸಮರ್ಥನೆ ನೀಡಿದ್ದು, ಇದರಿಂದ ಮತ್ತಷ್ಟು ಕೋಮು ಪ್ರಚೋದನೆ ಉಂಟಾಗಿದ್ದು, ಈ ಹಿನ್ನೆಲೆ ಪೋಲಿಸ್ ಇಲಾಖೆ ಕೂಡಲೇ ಕ್ರಮ ಜರುಗಿಸಬೇಕೆಂದು ನಿಯೋಗವು ಮನವಿಯಲ್ಲಿ ತಿಳಿಸಿದೆ.

ನಿಯೋಗದಲ್ಲಿ ಕೆಪಿಸಿಸಿ ಸಂಯೋಜಕರಾದ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಕೂರ್ ಹಾಜಿ , ಶರೀಪ್ ಕೊಯಿಲ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಶೀದ್ ಮುರ , ಬ್ಲಾಕ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷರಾದ ರಹ್ಮಾನ್ ಕಾವು,ಸಿರಿಲ್ , ಸಿರಾಜ್ ಮನಿಲ, ಎನ್ ಎಸ್ ಯುಐ ಮುಖಂಡರಾದ ಭಾತೀಷ ಅಳಕೆಮಜಲು , ಸುಹೈಲ್, ಅಸ್ಟನ್, ಫಯಾಜ್ ಉಪಸ್ಥಿತರಿದ್ದರು.


























