ಬಂಟ್ವಾಳ: ವ್ಯಕ್ತಿಯೋರ್ವರು ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಆರೋಪಿಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನದ ಮಹಿಳೆಯೋರ್ವರು ಠಾಣೆಗೆ ದೂರು ನೀಡಿದ್ದಾರೆ.
ಸ್ಥಳೀಯ ನಿವಾಸಿ ಸಂತೋಷ್ ಪ್ರಕರಣದ ಆರೋಪಿಯಾಗಿದ್ದು, ಕಳೆದ ಕೆಲ ಸಮಯಗಳಿಂದ ಮಹಿಳೆಯ ಮೊಬೈಲ್ ಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದ ಸ್ಥಳೀಯ ನಿವಾಸಿ ಸಂತೋಷ್ ಅ.21 ರಂದು ಸಾಯಂಕಾಲ ಗಂಡನ ಮನೆಯಿಂದ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಬೈಕಿನಲ್ಲಿ ಬಂದು ದಾರಿ ಮಧ್ಯೆ ನನ್ನನ್ನು ತಡೆದು ನಿಲ್ಲಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಆ ದಾರಿಯಾಗಿ ಸ್ಥಳೀಯರಿಬ್ಬರು ಬಂದಿರುವ ಹಿನ್ನೆಲೆಯಲ್ಲಿ ಆತ ನನ್ನನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ..

























