ವಿಟ್ಲ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆಯೊಂದಿಗೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಸುಳ್ಯ ತಾಲೂಕಿನ ಎಲಿಮಲೆ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ.
ಮುಡಿಪುವಿನಿಂದ ವಿಟ್ಲಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಸಾಲೆತ್ತೂರು ಸಮೀಪದ ಯುವತಿ ಪ್ರಯಾಣಿಸುತ್ತಿದ್ದು, ಅದೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ದೀಕ್ಷಿತ್ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆನ್ನಲಾಗಿದೆ.
ಈ ಬಗ್ಗೆ ತಿಳಿದ ಸಾರ್ವಜನಿಕರು ಆರೋಪಿಗೆ ಥಳಿಸಿದ್ದು, ಆರೋಪಿ ಓಡಿ ಹೋಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಠಾಣೆಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ..

























