ಸುಳ್ಯ: ವ್ಯಕ್ತಿಯೊಬ್ಬರು ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಗುಂಡು ಹಾರಿಸಿಕೊಂಡ ವ್ಯಕ್ತಿಯನ್ನು ಸುಳ್ಯ.ನ.ಪಂ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ರವರ ಪತಿ, ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂದು ಗುರುತಿಸಲಾಗಿದೆ.
ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಗುಂಡು ಹಾರಿಸಿಕೊಳ್ಳಲು ಕಾರಣವೇನೆಂಬ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

























