ವಿಭಿನ್ನ ಪರಿಕಲ್ಪನೆಯೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಸಂಸ್ಥೆ ಮತ್ತು ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಹಾಗು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರ ಮನೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು.

ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರ ಮನೆಯಗಳದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ರಂಗೋಲಿ ಬಿಡಿಸಿ ಹಣತೆ ಹಚ್ಚಿದರು. ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ದಂಪತಿಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ತನ್ನ ಸಾಧನೆಯ ಯಶೋಗಾಥೆಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ನಾಯ್ಕರು ಎಲ್ಲವನ್ನು ಪೇಟೆಯಿಂದ ತಂದು ತಿನ್ನುವುದರ ಬದಲು ತಾವೇ ನೆಟ್ಟು ಬೆಳೆಸಿ ತಿನ್ನುವುದರಲ್ಲಿ ಸಿಗುವ ತೃಪ್ತಿಯೇ ಬೇರೆ. ಯುವ ಸಮುದಾಯ ಕೃಷಿಯಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಪ್ರಕೃತಿಯನ್ನು ಸಂರಕ್ಷಿಸುವುದನ್ನು ಕಲಿಯಬೇಕು ಎಂದರು.

ಸುಳ್ಯದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ಕೊರಗಪ್ಪ ಕುರುಂಬುಡೇಲು,ಜ್ಞಾನದೀಪ ಎಜುಕೇಶನಲ್ ಚಾರಿಟೇಬಲ್ ನ ಟ್ರಸ್ಟಿ ಸಂಜಯ್ ನೆಟ್ಟಾರ್,ಉಪನ್ಯಾಸಕರುಗಳಾದ ಚಂದ್ರಶೇಖರ್ ಆಲೆಟ್ಟಿ,ಗೀತಾ ಬಾಲ ಚಂದ್ರ, ಬೃಂದಾ ಸೇರಿದಂತೆ ಮೊಂಟೆಸ್ಸರಿ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರು ಮತ್ತು ಇಂಟರ್ಯಾಕ್ಟ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ಥಾವಿಸಿ ಸ್ವಾಗತಿಸಿದರು .ಉಪನ್ಯಾಸಕ ಶರತ್ ಕಲ್ಲೋಣಿ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರ ಜಮೀನಿನಲ್ಲಿ ಅವರು ತೋಡಿದ ಸುರಂಗಗಳನ್ನು ವೀಕ್ಷಿಸಿ, ಮಾಹಿತಿ ಪಡೆದುಕೊಂಡರು.






























