ಶಿವಮೊಗ್ಗ: ಸೀಗೆಹಟ್ಟಿ ಭರ್ಮಪ್ಪ ನಗರದಲ್ಲಿ ಕಲ್ಲು ತೂರಾಟ, ಗಲಭೆ ಪ್ರಕರಣ ಸಂಬಂಧ ಪೊಲೀಸರು ಅಲರ್ಟ್ ಆಗಿದ್ದು, ಗಲಾಟೆ ಮಾಡಿದ್ದ ಮೂವರನ್ನ ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಫೌಜಾನ್, ಅಜ್ಹರ್ ಅಲಿಯಾಸ್ ಅಜ್ಜು, ಫರಾಜ್ ಬಂಧಿತ ಆರೋಪಿಗಳು.

ಸೋಮವಾರ ರಾತ್ರಿ 2 ಬೈಕ್ಗಳಲ್ಲಿ ಬಂದು ದಾಂಧಲೆ ಮಾಡಿದ್ದರು ಎನ್ನಲಾಗಿದೆ. ಈ ಮೂವರ ವಿರುದ್ಧ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿದ್ದವು.
ಗಲಾಟೆಯಿಂದ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಿನ್ನೆಲೆ ಪೊಲೀಸರು ರೂಟ್ ಮಾರ್ಚ್ ನಡೆಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ.
























