ಪುತ್ತೂರು : ಕಾಣಿಯೂರು ಎಂಬಲ್ಲಿ ಕೆಲವು ದಿನಗಳ ಹಿಂದೆ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದವರನ್ನು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರು ಭೇಟಿಯಾಗಿ ಸಾಂತ್ವನ ಹೇಳಿ, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.

ಯಾರೇ ತಪ್ಪು ಮಾಡಿದ್ದಲ್ಲಿ ಶಿಕ್ಷೆ ನೀಡಲು ಅದರದ್ದೇ ಆದ ಕಾನೂನು ಇದೆ, ಅದೂ ಬಿಟ್ಟು ಜನರು ಕಾನೂನು ಕೈಗೆತ್ತಿಕೊಳ್ಳುವುದು ಮಹಾ ಅಪರಾಧ, ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಜಿಲ್ಲೆಯಲ್ಲಿ ಮುಂದೆ ಇಂತಹ ಪ್ರಕರಣವನ್ನು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

























