ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ಪೊಯ್ಯಗದ್ದೆ ನಿವಾಸಿ ಮಹಮ್ಮದ್ ಆಸಿಫ್(23) ಬಂಧಿತ ಆರೋಪಿ.

ಈತ ಗಾಂಜಾ ಪ್ರಕರಣದಲ್ಲಿ ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಆರೋಪಿಯನ್ನು ಮನೆಯಲ್ಲಿ ಠಾಣಾ ಸಿಬ್ಬಂದಿಗಳು ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರು ಪಡಿಸಿದ್ದು. 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

























