ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ನ.1 ರಂದು ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳಿಗೆ ರಾಜ್ಯೋತ್ಸವ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ
ವಿಭಾಗದ ಉಪನ್ಯಾಸಕಿ ಭವ್ಯಶ್ರೀ ಮಾತನಾಡಿ, ಇತರ
ಭಾಷೆಗಳಿಗೆ ಗೌರವಿಸಿ ಕನ್ನಡ ಭಾಷೆಯನ್ನು ಬೆಳೆಸಿ, ಉಳಿಸುವ ಕಾರ್ಯ ವಿದ್ಯಾರ್ಥಿಗಳಿಂದ ನಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅತಿಥಿ, ಉಪನ್ಯಾಸಕರು ಮತ್ತು
ವಿದ್ಯಾರ್ಥಿಗಳಿಂದ ಕನ್ನಡಾಂಬೆಗೆ ಪುಷ್ಪಾರ್ಚನೆಗೈಯಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ ಕೆ ಉಪಸ್ಥಿತರಿದ್ದರು. ಕು.ಪ್ರಣಮ್ಯ ಸಿ.ಎ ಸ್ವಾಗತಿಸಿ, ನಿರೂಪಿಸಿದರು. ವಿದ್ಯಾರ್ಥಿ ಹಸ್ತಿಕ್ ವಂದಿಸಿದರು.