ಬಂಟ್ವಾಳ: ಸ್ವಾತಂತ್ರ್ಯಾನಂತರದ ಭಾರತದಲ್ಲಿ 1956ರಲ್ಲಿ ಭಾಷಾವಾರು ಮತ್ತು ಪ್ರಾಂತ್ಯವಾರು ವಿಂಗಡನೆಯಾದಾಗ ಮೈಸೂರು ಎನ್ನುವ ಹೆಸರಿನಲ್ಲಿ ಮೂಡಿ ಬಂದ ರಾಜ್ಯ ನಮ್ಮದು. ಆ ಬಳಿಕ 1973ರಲ್ಲಿ ಪುನರ್ವಿಂಗಡನೆಯಾದಾಗ ನಮ್ಮ ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡಿತು. ಈ ದಿನವನ್ನು ಕನ್ನಡ ರಾಜ್ಯೋತ್ಸವ ಎಂದು ವಿಜ್ರಂಭಣೆಯಿಂದ, ಸಂತಸದಿಂದ ಆಚರಿಸಲಾಗುತ್ತಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಮಾಣಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ತಾಯಿ ಭುವನೇಶ್ವರಿಯ ಅಲಂಕೃತ ಭಾವಚಿತ್ರದ ಎದುರು ದೀಪ ಮತ್ತು ಹಣತೆ ಹಚ್ಚಿ, ರಂಗೋಲಿ ಬಿಡಿಸುವ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ಸಿಗುವ ಪಾದರಕ್ಷೆಗಳನ್ನು ವಿತರಿಸಲಾಯಿತು.

ಗ್ರಾಮ ಪಂಚಾಯತ್ ಸದಸ್ಯ ಈ ವೇಳೆ ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಮಾಣಿ, ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ಇಸ್ಮಾಯಿಲ್, ವನಿತಾ, ವಿಜಯ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಸಹಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.





























