ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ (36) ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಮೃತದೇಹ ಕುಳ ಗ್ರಾಮದ ದಗಮಜಲು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ಪೆಕ್ಟರ್ ನಾಗರಾಜ್ ಎಚ್.ಇ, ಎಸ್.ಐ. ಸಂದೀಪ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.