ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ 2022’ ಕಾರ್ಯಕ್ರಮವು ನ.5 ರಂದು ನಡೆಯಲಿದೆ.
ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವರಾದ ವಿ. ಸುನೀಲ್ ಕುಮಾರ್ ರವರು ನೆರವೇರಿಸಲಿದ್ದಾರೆ.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ, ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಸಭಾಧ್ಯಕ್ಷತೆಯನ್ನು ಶಾಸಕರಾದ ಸಂಜೀವ ಮಠಂದೂರು ವಹಿಸಲಿದ್ದಾರೆ., ಮುಖ್ಯ ಅಥಿತಿಗಳಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೆ ಗೌಡ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ, ಮುಲ್ಕಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಮಂಗಳೂರು ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿಯಾದ ಪದ್ಮರಾಜ್ ಆರ್., ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ಫಾ. ಸ್ಕ್ಯಾನಿ ಪಿಂಟೋ, ಬುಶ್ರಾ ವಿದ್ಯಾಸಂಸ್ಥೆಯ ಸ್ಥಾಪಕಧ್ಯಕ್ಷರಾದ ಅಜೀಜ್ ರವರು ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಸನ್ಮಾನ ನಡೆಯಲಿದ್ದು, ಪುತ್ತೂರು ಗ್ಲೋರಿಯಾ ಕಾಲೇಜಿನ ಸ್ಥಾಪಕಧ್ಯಕ್ಷರಾದ ಎಸ್. ಆನಂದ ಆಚಾರ್ಯ, ರಾಷ್ಟ್ರೀಯ ವಾಲಿಬಾಲ್ ತರಬೇತುದಾರರು, ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಪಿ.ವಿ. ನಾರಾಯಣ್, ಇಂಟರ್ನ್ಯಾಷನಲ್ ಯೋಗ ಚಾಂಪಿಯನ್, ತೃತೀಯ ಬಿಎಸ್ಸಿ ಫ್ಯಾಷನ್ ಡಿಸೈನ್ ನ ವಿದ್ಯಾರ್ಥಿ ಪ್ರಣಮ್ಯ ಸಿ.ಎ. ರವರು ಸನ್ಮಾನಿಸಲ್ಪಡಲಿದ್ದಾರೆ.
ಕಾರ್ಯಕ್ರಮವು ಬೆಳಗ್ಗೆ 7 ಗಂಟೆಗೆ ಗಣಹೋಮ, ಶಾರದಾ ಪೂಜೆ, ಭಜನಾ ಸಂಕೀರ್ತನೆ ಪ್ರಾರಂಭಗೊಳ್ಳಲಿದ್ದು, ಬೆಳಗ್ಗೆ 10 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಸಹಭೋಜನ, ಸಾಂಸ್ಕೃತಿಕ ವೈಭವ, ಸಂಜೆ ದೀಪಾವಳಿ ವೈಭವ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ..





























