ಪುತ್ತೂರು: ಬೆಳ್ಳಾರೆಯಲ್ಲಿ ಜು.26 ರಂದು ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಪಿಎಫ್ಐ ಸಂಘಟನೆಯ ನಾಲ್ವರು ಸದಸ್ಯರಿಗಾಗಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.

ಪುತ್ತೂರಿನ ಬಸ್ ನಿಲ್ದಾಣದಲ್ಲಿ ಸಹಿತ ಹಲವೆಡೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದು, ಸಾರ್ವಜನಿಕ ಇವರನ್ನು ಕಂಡರೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಬೆಳ್ಳಾರೆ ಬೂಡು ನಿವಾಸಿ, ಮೊಹಮ್ಮದ್ ಮುಸ್ತಫಾ (ಪೈಚಾರು ಮುಸ್ತಫಾ), ಮಡಿಕೇರಿ ನಿವಾಸಿ ತುಫ್ಫೈಲ್, ಸುಳ್ಯ ನಗರ ಕಲ್ಲುಮುಟ್ಟು ನಿವಾಸಿ, ಉಮ್ಮರ್ ಫಾರೂಕ್, ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ಧಿಕ್ (ಪೈಂಟರ್ ಸಿದ್ಧಿಕ್) ಎಂಬವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.
ಅವರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗುವುದು. ಅದೇ ರೀತಿ ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್.ಐ. ಎ ಪ್ರಕಟಣೆ ತಿಳಿಸಿದೆ..



























