ಕಡಬ : ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಡಬ ಪೇಟೆಯ ಸಮೀಪ ನ.4 ರಂದು ರಾತ್ರಿ ವೇಳೆ ನಡೆದಿದೆ.
ಕಡಬದ ಹಳೆಸ್ಟೇಷನ್ ಎಂಬಲ್ಲಿ ರಸ್ತೆ ಬದಿಯ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ವಿದ್ಯುತ್ ತಂತಿಗಳು ಕಾರಿನ ಮೇಲೆ ಬಿದ್ದಿದೆ.
ಕಾರು ಕಡಬದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕಾರು ಸುಬ್ರಹ್ಮಣ್ಯ ಮೂಲದ್ದು ಎನ್ನಲಾಗಿದೆ.



























