ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂದ್ರಗ್ರಹಣದ ದಿನವಾದ ನ.8 ರಂದು ಯಾವುದೇ ಸೇವೆಗಳು ನೆರವೇರುವುದಿಲ್ಲ.
ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9ರಿಂದ 11.30ರ ತನಕ, ಗ್ರಹಣ ಸ್ಪರ್ಶ ಸಮಯವಾದ ಮಧ್ಯಾಹ್ನ 2.39ರಿಂದ ಗ್ರಹಣ ಮೋಕ್ಷ ಸಮಯವಾದ 6.19ರ ತನಕ ಹಾಗೂ ರಾತ್ರಿ 7.30ರಿಂದ 9ರ ತನಕ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

























