ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದ ಒಂದನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಬ್ರಾರ್ ಎನ್.ಎ. (6) ರಕ್ತ ಸಂಬಂಧಿ ಕಾಯಿಲೆಯಿಂದ ಶನಿವಾರ ಮೃತಪಟ್ಟಿದ್ದಾನೆ.
ಅಬೂಬಕ್ಕರ್ ಮತ್ತು ಸಂಶಾದ್ ಕರುವೇಲು ದಂಪತಿ ಪುತ್ರನಾದ ಆತ ರಕ್ತ ಸಂಬಂಧಿ ಕಾಯಿಲೆಯಿಂದ ಉಂಟಾದ ಅನಾರೋಗ್ಯಕ್ಕೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
























