ಕಡಬ: ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಫಾರ್ಚುನರ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.























