ಪುತ್ತೂರು: ಮೂಡಂಬೈಲು ರವಿ ಶೆಟ್ಟಿ ಅಭಿನಂದನಾ ಸಮಿತಿ ವತಿಯಿಂದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಮೂಡಂಬೈಲು ರವಿ ಶೆಟ್ಟಿಯವರಿಗೆ ‘ಹುಟ್ಟೂರ ಸನ್ಮಾನ’ ಕಾರ್ಯಕ್ರಮ ನ.12 ರಂದು ಮುಂಡೂರು, ಪಜಿಮಣ್ಣು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣಪತ್ರ ಬಿಡುಗಡೆ ಕಾರ್ಯಕ್ರಮ ನ.9 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಯವರು ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಸಂಜೀವ ಮಠಂದೂರು ರವರು ವಹಿಸಲಿದ್ದಾರೆ. ಅಭಿನಂದನಾ ಭಾಷಣವನ್ನು ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ನ ಅಧ್ಯಕ್ಷರಾದ ಪ್ರೊ. ತುಕರಾಮ ರವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ಸುರೇಶ್ ಪುತ್ತೂರಾಯ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಉದ್ಯಮಿ ಉಮೇಶ್ ಕರ್ಕೇರಾ ನಾಡಾಜೆ, ಅಕ್ಷಯ ಕಾಲೇಜಿನ ಸಂಚಾಲಕರಾದ ಜಯಂತ ನಡುಬೈಲು, ಸಾಂದೀಪನಿ ವಿದ್ಯಾಸಂಸ್ಥೆಯ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರು ರವರು ಆಗಮಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಸಂಘ-ಸಂಸ್ಥೆಗಳಿಗೆ ಮತ್ತು ಸಾರ್ವಜನಿಕರಿಗೆ ವೇದಿಕೆಯಲ್ಲಿ ಅಭಿನಂದನೆ ಸಲ್ಲಿಸಲು ಅವಕಾಶವಿದೆ. ಅಭಿನಂದಿಸುವವರು ತಮ್ಮ ಹೆಸರನ್ನು ಮೊದಲೇ ನೋಂದಾಯಿಸಬೇಕು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..


























