ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಜೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮಹಮ್ಮದ್ ಇಮ್ರಾನ್ (26) ಬಂಧಿತ ಆರೋಪಿ.

ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದರು.
ಬಸ್ ಇಂದು ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಇಮ್ರಾನ್ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.