ಕಡಬ: ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿ, ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಕಡಬ-ಪಂಜ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.
ಪಂಜ ನಿವಾಸಿ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಮೃತ ಬಾಲಕ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಈ ಘಟನೆ ನಡೆದಿದೆ.
ಘಟನೆಯಿಂದಾಗಿ ಗಂಭೀರ ಗಾಯಗೊಂಡ ಬಾಲಕನನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ..