ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಕಾರ್ತಿಕ ಮಾಸದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನ.19ರಿಂದ ನ.23ರ ವರೆಗೆ ನೆರವೇರಲಿದೆ.
ನ.19 ರಂದು ಹೊಸ ಕಟ್ಟೆ ಉತ್ಸವ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆಗೊಳ್ಳಲಿದೆ. ನ.20 ರಂದು ಕರೆ ಕಟ್ಟೆ ಉತ್ಸವ, ನ. 21ರಂದು ಲಲಿತೋದ್ಯಾನ ಉತ್ಸವ ಹಾಗೂ ಲಲಿತಕಲಾ ಗೋಷ್ಠಿ, ನ.22ರಂದು ಕಂಚಿಮಾರು ಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ನಡೆಯಲಿದೆ.
ನ.23ರಂದು ಗೌರಿಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ ಹಾಗೂ ನ.24ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನೆರವೇರಲಿದೆ.


























