ಶ್ರೀ ಆದಿಚುಂಚನಗಿರಿ ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿದ 14 ರ ವಯೋಮಾನದ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ಕರಿಂಗಾಣದ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ಸಂಚಾಲಕರಾದ ವಂ.ಫಾ. ಪಾವ್ಲ್ ಪಿಂಟೋ, ಮುಖ್ಯೋಪಾಧ್ಯಾಯರಾದ ವಂ.ಫಾ. ಕಿರಣ್ ಮ್ಯಾಕ್ಸಿಮ್ ಪಿಂಟೋ ರವರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿ ನ. 20 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದಾರೆ. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಭಾಗವಹಿಸಿದ ಆಂನ್ಸನ್ ಲೂಯಿಸ್ ಹ್ಯಾಮರ್ ಹೆಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಅನ್ಸಾರ್ ಕೊಳಕೆ ರವರು ತರಬೇತು ನೀಡಿರುತ್ತಾರೆ.