ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅನಾರೋಗ್ಯದಿಂದ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ.ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಇದ್ದರು.


























