ಪುತ್ತೂರು : ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿ ಕಿರುಕುಳ ನೀಡಿದ ಘಟನೆ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನ.20 ರಂದು ರಾತ್ರಿ ನಡೆದಿದೆ.
ಮಹಿಳೆಯೊಬ್ಬರ ಅತ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅತ್ತೆಯನ್ನು ನೋಡಿಕೊಳ್ಳಲು ಮಹಿಳೆ ಆಸ್ಪತ್ರೆಯಲ್ಲಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಆಕೆಗೆ ಕಿರುಕುಳ ನೀಡಿದ್ದಾನೆ. ಮಹಿಳೆ ಕಿರುಚಾಡತೋಡಗುತ್ತಿದ್ದಂತೆ ಸ್ಥಳದಲ್ಲಿದ್ದ ಕೆಲವರು ಆತನನ್ನು ಹಿಡಿಯಲು ಯತ್ನಿಸಿದ್ದಾರೆ., ಆದರೇ ಆತ ತನ್ನ ರಿಕ್ಷಾದ ಮೂಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ..
























