ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ರೈಡ್ ಮಾಡಿದ್ದಾರೆ.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ.
ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಅವರ ಸಂಬಂಧಿಕರ ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ..

























