ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್ ಇಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಆರ್.ಅಮನ್ ರಾಜ್ (ರಾಜೇಶ್ ಮತ್ತು ಅಶ್ವಿನಿ ರಾಜೇಶ್, ಪುತ್ತೂರು ದಂಪತಿಯ ಪುತ್ರ) ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ 50ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಮಾಲ .ವಿ.ಎನ್ ತಿಳಿಸಿದ್ದಾರೆ.

ಇವರಿಗೆ ಶಾಲಾ ಅಧ್ಯಕ್ಷರು, ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.


























