ವಿಟ್ಲ: ಹಿಂದೂಗಳ ಧಾರ್ಮಿಕ ಕಾರ್ಯಕ್ರಮಕ್ಕೆ ಮುಸ್ಲಿಂ ಸಂಘಟನೆಯ ಕಾರ್ಯಕರ್ತರು ಶುಭಕೋರಿ ಬ್ಯಾನರ್ ಅಳವಡಿಸಿದ್ದು, ಸದ್ಯ ಆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬಂಟ್ವಾಳ ತಾಲೂಕು ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ದೇವಿನಗರದ ಶ್ರೀ ಮಾರಿಯಮ್ಮ ಯುವಕ ಸಂಘದ 28ನೇ ವಾರ್ಷಿಕೋತ್ಸವ ನ.27 ರಂದು ನಡೆಯಲಿದ್ದು, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗುವ ವಾರ್ಷಿಕೋತ್ಸವದಂದು ರಾತ್ರಿ ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾರ್ಶದ ‘ಡೀಸೆಂಟ್ ಫ್ರೆಂಡ್ಸ್’ ಸಂಘಟನೆಯ ಕಾರ್ಯರ್ತರು ಶುಭಕೋರಿ ಬ್ಯಾನರ್ ಅನ್ನು ಅಳವಡಿಸಿದ್ದಾರೆ.

ಈ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾವೈಕ್ಯತೆಯ ಸಂದೇಶದ ಸಾರುವಂತಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ.


























