ಮಂಗಳೂರು: ಕಂಕನಾಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆರೋಪಿ ಶಂಕಿತ ಉಗ್ರ ಶಾರೀಕ್ ಬಗ್ಗೆ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇದೀಗ ಈ ಪ್ರಕರಣವನ್ನು ರಾಜ್ಯ ಸರ್ಕಾರ, ಎನ್ಐಎ ತನಿಖೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಸದ್ಯ ಶಂಕಿತ ಉಗ್ರ ಶಾರೀಕ್ ವಿರುದ್ಧ ಯುಎಪಿಎ ಕಾಯ್ದೆ ಅನ್ವಯ ಎನ್ಐಎ ತನಿಖೆ ನಡೆಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ.
ಈ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಾಹಿತಿ ನೀಡಿದ್ದು, ಮಂಗಳೂರು, ಕಂಕನಾಡಿ ಸಮೀಪ ಇತ್ತೀಚೆಗೆ ನಡೆದ ಕುಕ್ಕರ್ ಸ್ಪೋಟದ ತನಿಖೆಯನ್ನು ಕೇಂದ್ರ ತನಿಖಾಸಂಸ್ಥೆ ಎನ್ಐಎಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಆಜ್ಞೆ ಹೊರಡಿಸಿದೆ ಎಂದಿದ್ದಾರೆ..

























