ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ.

ಎಣ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಿನ್ನೆ ರಾತ್ರಿ ಈ ದುರ್ಘಟನೆ ನಡೆದಿದೆ.
ಮೃತ ಬಾಲಕನನ್ನು ಸಾಯ ನಿವಾಸಿ ನಾರಾಯಣ ನಾಯ್ಕ್ ಎಂಬವರ ಪುತ್ರ ಜಿತೇಶ್ (17) ಎಂದು ಗುರುತಿಸಲಾಗಿದೆ.

ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಈ ದುರ್ಘಟನೆಗೆ ಕಾರಣ ಎಂದು ನಾಗರೀಕ ವಲಯದಲ್ಲಿ ಸಂಶಯ ವ್ಯಕ್ತವಾಗಿದೆ.
ಸ್ಥಳೀಯ ಸಿಪಿಐಎಂ ಕಾರ್ಯಕರ್ತರು ವಿದ್ಯುತ್ ಅಳವಡಿಸಿ ದುರ್ಘಟನೆ ನಡೆದ ನಂತರ ವಿದ್ಯುತ್ ಉಪಕರಣಗಳನ್ನು ಕಿತ್ತೆಸೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ..