ಸವಣೂರು: ಯುವಕನೋರ್ವನ ಮೃತದೇಹ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪುತ್ತೂರು-ಕಾಣಿಯೂರು ರೈಲು ಮಾರ್ಗದ ಮಧ್ಯೆ ಸವಣೂರು ಗೇಟ್ ಬಳಿಯ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.ಸವಣೂರು ನಿವಾಸಿ ಮಹೇಶ್ ಯಾನೆ ಸನ್ನು(39) ಮೃತ ದುರ್ದೈವಿ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.