ಪುತ್ತೂರು: ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳಿಗೆ ಸಂಬಳ ನೀಡದೆ ಇರುವ ಹಿನ್ನೆಲೆ ಅವರು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ತಿಳಿದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ರವರು ಸಿಬ್ಬಂದಿಗಳೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ತಿಂಗಳ ಸಂಬಳ ನೀಡುವಂತೆ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬಿಜೆಪಿ ರಾಜ್ಯ ಸರಕಾರ ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳಿಗೆ ಸಂಬಳ ನೀಡದೇ ಇರುವುದರಿಂದ ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳು ಕೆಲಸ ಮಾಡದೇ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದಾಗಿ ಬಡ ಜನರಿಗೆ, ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ ಊಟ ,ತಿಂಡಿಗೆ ತೊಂದರೆ ಆಗುವುದನ್ನು ಗಮನಿಸಿದ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರತಿಭಟನೆಯನ್ನು ಹಿಂದೆ ತೆಗೆದುಕೊಳ್ಳಲು ಒತ್ತಾಯಿಸಿದ್ದು, ಟೆಂಡರ್ ಪಡೆದ ಸಂಸ್ಥೆ ಒಂದು ತಿಂಗಳ ಸಂಬಳ ಇಂದು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಾಳೆಯಿಂದ ಇಂದಿರಾ ಕ್ಯಾಂಟಿನ್ ತಮ್ಮ ಕಾರ್ಯ ಆರಂಭಿಸಲಿದೆ ಎಂದು ವರದಿಯಾಗಿದೆ..