ಈಶ್ವರಮಂಗಲ: ನೆಟ್ಟಣಿಗೆ ಮುಡ್ನೂರು ಬೆಳ್ಳಿಚಡವು ಅಯ್ಯಪ್ಪ ಸೇವಾ ಸಮಿತಿ ರಿ. ನೇತೃತ್ವದಲ್ಲಿ ‘ಶ್ರೀ ಅಯ್ಯಪ್ಪ ಸ್ವಾಮಿ ಹಾಗೂ ಶಾರದಾಂಬ ಭಜನಾ ಮಂದಿರ ಮತ್ತು ನಾಗ ಸಾನಿಧ್ಯ’ದ ಪ್ರತಿಷ್ಠಾ ಮಹೋತ್ಸವವು ಡಿ.7 ಮತ್ತು 8 ರಂದು ನಡೆಯಲಿದೆ.
ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದೊಂದಿಗೆ, ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ, ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಬೆಳ್ಳಿಚಡವು ಎಂಬಲ್ಲಿ ನೂತನವಾಗಿ ನಿರ್ಮಿಸಿದ ‘ಶ್ರೀ ಅಯ್ಯಪ್ಪ ಸ್ವಾಮಿ ಹಾಗೂ ಶಾರದಾಂಬ ಭಜನಾ ಮಂದಿರ ಮತ್ತು ನಾಗ ಸಾನಿಧ್ಯ’ದ ಪ್ರತಿಷ್ಠಾ ಮಹೋತ್ಸವವು ನಡೆಯಲಿದೆ.
ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ವಿವಿಧ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ.
ಡಿ.7 ರಂದು ಸಂಜೆ 5 ಗಂಟೆಗೆ ಈಶ್ವರಮಂಗಲ ಪೇಟೆಯಿಂದ ಭಜನಾ ಮಂದಿರದ ವರೆಗೆ ಹೊರ ಕಾಣಿಕೆ ಮೆರವಣಿಗೆ ನಡೆಯಲಿದೆ. ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ಗೌರವಾಧ್ಯಕ್ಷರಾದ ಶ್ರೀಕೃಷ್ಣ ಭಟ್ ಮುಂಡ್ಯ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ.
ಸಂಜೆ 5.30ಕ್ಕೆ ದೇವರ ಛಾಯಾ ಬಿಂಬವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಈಶ್ವರಮಂಗಲದಿಂದ ಪಲ್ಲಕ್ಕಿ ಮೆರವಣಿಗೆಯಲ್ಲಿ ಭಜನೆ, ಚೆಂಡೆ, ವಾದ್ಯಘೋಷಗಳೊಂದಿಗೆ ಭಜನಾ ಮಂದಿರಕ್ಕೆ ಆಗಮಿಸಲಿದೆ. ಸಂಜೆ 6.30ಕ್ಕೆ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, ರಾತ್ರಿ 7 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ರಾತ್ರಿ 8.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಡಿ.8 ರಂದು ಬೆಳಿಗ್ಗೆ 5 ಗಂಟೆಗೆ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ ನಡೆಯಲಿದೆ. ಬೆಳಿಗ್ಗೆ 6 ಗಂಟೆಯಿಂದ 7 ಗಂಟೆಯ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಬೆಳಿಗ್ಗೆ 8. ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ ಗಂಟೆ 10.30 ರಿಂದ ಧಾರ್ಮಿಕ ಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ರವರು ಆಶೀರ್ವಚನ ನೀಡಲಿದ್ದಾರೆ. ಕುಂಟಾರು ರವೀಶ ತಂತ್ರಿ ರವರು ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಸಂಜೀವ ಮಠಂದೂರು ರವರು ವಹಿಸಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ಕೇರಳ ಹಿಂದೂ ಐಕ್ಯ ವೇದಿಕೆಯ ಕಾರ್ಯಾಧ್ಯಕ್ಷರಾದ ವಲ್ಲನ್ ತಿಲ್ಲಂಕೇರಿ ರವರು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೇನಾಲ ಕಿಶನ್ ಜೆ. ಶೆಟ್ಟಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಸ್.ಬಿ ಜಯರಾಮ ರೈ ಬಳ್ಳಜ್ಜ, ಮಂಗಳೂರು ಎಮ್.ಆರ್.ಪಿ.ಎಲ್ ನ ಸೀತಾರಾಮ ರೈ ಕೈಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಆಗಮಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ, ಮಧ್ಯಾಹ್ನ 2 ಗಂಟೆಯಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 7.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ 8 ಗಂಟೆಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ, ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























